Wednesday, August 10, 2022

Latest Posts

ಕೊಡಗು: ಶುಕ್ರವಾರ 68 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ
:

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 68 ಮಂದಿಯಲ್ಲಿ ಕೊರೋನಾ ಸೋಂಕು‌ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 28 ಸೋಮವಾರಪೇಟೆ ತಾಲೂಕಿನಲ್ಲಿ 27 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 13 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 33,896ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 76ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 32,864 ಮಂದಿ ಸೋಂಕು ಮುಕ್ತರಾದಂತಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 414ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 618 ಸಕ್ರಿಯ ಪ್ರಕರಣಗಳಿದ್ದು, 81 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ. 2.12 ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss