Saturday, August 13, 2022

Latest Posts

ಕೊಡಗು: ಬುಧವಾರ ಮತ್ತೆ 32 ಮಂದಿಯಲ್ಲಿ ಕೋವಿಡ್ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ 32 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 14, ಸೋಮವಾರಪೇಟೆ ತಾಲೂಕಿನಲ್ಲಿ 8 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 10 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ34,054ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 47ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 33,156ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 416ಮಂದಿ ಸೋಂಕಿಗೆ ಬಲಿಯಾಗಿದ್ದು, ಪ್ರಸಕ್ತ 482 ಸಕ್ರಿಯ ಪ್ರಕರಣಗಳಿವೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ70ರಷ್ಟಿದ್ದರೆ, ಪಾಸಿಟಿವಿಟಿ ದರ ಶೇ.0.7ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss