Wednesday, August 10, 2022

Latest Posts

ಕೊಡಗು: ಕೊರೋನಾ ಸೋಂಕಿಗೆ ಒಬ್ಬರು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 15 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 2,‌ಸೋಮವಾರಪೇಟೆ ತಾಲೂಕಿನಲ್ಲಿ 6ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 7ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 34,344ರಷ್ಟಾಗಿದ್ದು, ಸತ್ತವರ ಸಂಖ್ಯೆ 421ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 10 ದಿ ಗುಣಮುಖರಾಗಿದ್ದು, ಇದರೊಂದಿಗೆ ಇದುವರೆಗೆ 33,384ಸೋಂಕಿನಿಂದ ಮುಕ್ತರಾಗಿದ್ದಾರೆ. ಪ್ರಸಕ್ತ 539 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 62 ಹಾಗೂ ಪಾಸಿಟಿವಿಟಿ ಪ್ರಮಾಣ ಶೇ. 0.4ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss