ಕೊಡಗು: 15 ರಿಂದ 18 ವರ್ಷದ 26 ಸಾವಿರ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಗುರಿ

ಹೊಸದಿಗಂತ ವರದಿ, ಕೊಡಗು:
ಕೊಡಗು ಜಿಲ್ಲೆಯಲ್ಲಿ ಜ.3ರಿಂದ ‌15 ರಿಂದ 18 ವರ್ಷ ವಯೋಮಾನದ 26,049 ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲು ಕ್ರಿಯಾ ಯೋಜನೆ ರೂಪಿಸಲಾಗಿದೆ.
ಇವರುಗಳಿಗೆ ಶಾಲೆ, ಕಾಲೇಜುಗಳಲ್ಲಿಯೇ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದ್ದು,
ಶಾಲಾ-ಕಾಲೇಜುಗಳಿಗೆ ಲಸಿಕೆ ನಡೆಯುವ ದಿನಾಂಕ ನೀಡಲಾಗುತ್ತಿದ್ದು, ಶಾಲೆ, ಕಾಲೇಜಿನ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರು ಲಸಿಕೆ ನಡೆಯುವ ದಿನ ಎಲ್ಲಾ ವಿದ್ಯಾರ್ಥಿಗಳು ಹಾಜರಿರುವಂತೆ ನೋಡಿಕೊಳ್ಳಬೇಕಿದೆ. ಶಾಲಾ- ಕಾಲೇಜುಗಳಿಂದ ಹೊರಗುಳಿದಿರುವ 15 ರಿಂದ 18 ವರ್ಷ ವಯೋಮಾನದ ಮಕ್ಕಳನ್ನು ಸಮೀಪದ ಶಾಲಾ-ಕಾಲೇಜಿಗೆ ಕರೆತರಲು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಈ ಲಸಿಕಾ ಶಿಬಿರದ ಪೂರ್ಣ ಸದುಪಯೋಗ ಪಡೆದುಕೊಂಡು 15 ರಿಂದ 18 ವರ್ಷ ವಯೋಮಾನದ ಮಕ್ಕಳನ್ನು ತಪ್ಪದೆ ಲಸಿಕಾ ಶಿಬಿರಕ್ಕೆ ಕಳುಹಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!