ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕೊಡಗು:
ಕೊಡಗು ಅನ್ ಲಾಕ್ ಘೋಷಣೆಯಾಗುತ್ತಿದ್ದಂತೆ ಕೊರೋನಾ ಸೋಂಕಿನಲ್ಲೂ ಹೆಚ್ಚಳ ಕಂಡು ಬಂದಿದ್ದು, ಗುರುವಾರ ಶೇ.2.77ರಷ್ಟಿದ್ದ ಪಾಸಿಟಿವಿಟಿ ದರ ಶುಕ್ರವಾರ ಶೇ.4.32ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 95 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 29, ಸೋಮವಾರಪೇಟೆ ತಾಲೂಕಿನಲ್ಲಿ 36 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 30ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 30,410ರಷ್ಟಾಗಿದ್ದು ಗುರುವಾರ 220 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 29,327ರಷ್ಟಾಗಿದೆ.
ಪ್ರಸಕ್ತ ಜಿಲ್ಲೆಯಲ್ಲಿ 703 ಸಕ್ರಿಯ ಪ್ರಕರಣಗಳಿದ್ದು,ಇದುವರೆಗೆ 380 ಮಂದಿ ಸಾವಿಗೀಡಾಗಿದ್ದಾರೆ. 151 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ ಶೇ.4.32ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.