ಕೊಡಗು: ಅಗ್ನಿಪಥ್ ಅಭ್ಯರ್ಥಿಗಳಿಗೆ ಆ.7ರಂದು ಓಟದ ಸ್ಪರ್ಧೆ

ಹೊಸದಿಗಂತ ವರದಿ, ಮಡಿಕೇರಿ:
ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಲು ಅರ್ಜಿ ಹಾಕಿರುವ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ‘ಅಗ್ನಿವೀರ್ 2022’ ರಸ್ತೆ ಓಟ ಸ್ಪರ್ಧೆ ಆಗಸ್ಟ್ 7ರಂದು ನಡೆಯಲಿದೆ.
ಮಡಿಕೇರಿ ಹೊರವಲಯದ ಕ್ಲಬ್ ಮಹೀಂದ್ರ ಬಳಿಯಿಂದ ಆರಂಭವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಗೇಟ್ ಬಳಿ ಕೊನೆಗೊಳ್ಳಲಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್ ರೈ ತಿಳಿಸಿದ್ದಾರೆ.
ಬೆಳಗ್ಗೆ 9.30ಕ್ಕೆ ಸ್ಪರ್ಧೆ ಆರಂಭವಾಗಲಿದ್ದು, ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಗದೀಶ್ ರೈ, ಐತಪ್ಪ ರೈ, ಬಿ.ಕೆ. ರವೀಂದ್ರ ರೈ, ಜಯಪ್ರಕಾಶ್ ರೈ, ಮಡಿಕೇರಿ ನಗರಸಭೆ ಸದಸ್ಯ ಅರುಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ನಂತರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಆವರಣದಲ್ಲಿ ಪುಲ್ ಅಪ್ಸ್ ಸ್ಪರ್ಧೆ ಇರಲಿದೆ. ಬಳಿಕ ಬಾಲಭವನ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿತರಣೆ ನೆರವೇರಲಿದೆ. ಸಂಘದ ಅಧ್ಯಕ್ಷ ವಸಂತ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಯಪ್ರಕಾಶ್ ರೈ, ಐತಪ್ಪ ರೈ ಉಪಸ್ಥಿತರಿರಲಿದ್ದು, ಮಕ್ಕಳ ತಜ್ಞ ವೈದ್ಯ ಹಾಗೂ ನಿವೃತ್ತ ಸೇನಾಧಿಕಾರಿ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮುಖ್ಯ ಭಾಷಣ ಮಾಡಲಿದ್ದಾರೆ.
ಜಿಲ್ಲೆಯ ವಿವಿಧೆಡೆಯ ನೂರಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ಸ್ಪರ್ಧೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಓಟ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ತಲಾ ನಾಲ್ಕು ಸ್ಪರ್ಧಿಗಳಿಗೆ ಹಾಗೂ ಪುಲ್ ಅಪ್ಸ್’ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ವಿಶೇಷ ಬಹುಮಾನ ನೀಡಲಾಗುವುದು. ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸ್ಪರ್ಧಿಗೆ ವಿಶೇಷ ಉಡುಗೊರೆ ನೀಡಲಾಗುವುದೆಂದು ಅಸೋಸಿಯೇಷನ್ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!