Wednesday, August 17, 2022

Latest Posts

ಕೊಡಗು| ಕೊರೋನಾ ಸೋಂಕಿತ ಪ್ರಕರಣಗಳಲ್ಲಿ ಸ್ವಲ್ಪ ಇಳಿಕೆ: ಒಟ್ಟು ಸೋಂಕಿತರ ಸಂಖ್ಯೆ ಎಷ್ಟು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡಿದ್ದು, ಕಳೆದ 24ಗಂಟೆಗಳಲ್ಲಿ 76 ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 37, ಸೋಮವಾರಪೇಟೆ ತಾಲೂಕಿನಲ್ಲಿ 25 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 14 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 30,315ಕ್ಕೆ ಏರಿಕೆಯಾಗಿದೆ.
ಕಳೆದ 24ಗಂಟೆಗಳಲ್ಲಿ 110ಮಂದಿ ಸೋಂಕು ಮುಕ್ತರಾಗಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 29,107ರಷ್ಟಾಗಿದೆ. ಇದುವರೆಗೆ ಒಟ್ಟು 380ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 828 ಸಕ್ರಿಯ ಪ್ರಕರಣಗಳಿದ್ದು, 155 ಕಂಟೈನ್ ಮೆಂಟ್ ವಲಯಗಳಿವೆ. ಗುರುವಾರದ ಪಾಸಿಟಿವಿಟಿ ದರ ಶೇ.2.77ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!