ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಸೋಮವಾರ 26 ಹೊಸ ಪ್ರಕರಣಗಳು ವರದಿಯಾಗಿವೆ.
ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 7 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 11 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6613ರಷ್ಟಾಗಿದ್ದು, ಈ ಪೈಕಿ 6357 ಮಂದಿ ಗುಣಮುಖರಾಗಿದ್ದಾರೆ. 173 ಸಕ್ರಿಯ ಪ್ರಕರಣಗಳಿದ್ದು, 83ಮಂದಿ ಸಾವಿಗೀಡಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ಮಡಿಕೇರಿಯ ಸಂತ ಜೋಸೆಫರ ಶಾಲೆ ಬಳಿ,ದೇಚೂರು, ಗಾಳಿಬೀಡು,ಚೇರಂಬಾಣೆ ಬಕ್ಕ,ಸೋಮವಾಪೇಟೆ ತಾಲೂಕಿನ ಹೆಬ್ಬಾಲೆ ನಡುಬೀದಿ, ಶಿರಂಗಾಲ,ಆಲೂರು ಸಿದ್ದಾಪುರ, ಹುಲುಸೆ, ಪೊನ್ನಂಪೇಟೆ ತಾಲೂಕಿನ ಪೊನ್ನಂಪೇಟೆ, ಗೋಣಿಕೊಪ್ಪ ಎಂಸಿ ಕಾಲೋನಿ,ಬೀರುಗ,ಕುಟ್ಟದಲ್ಲಿ ಹೊಸದಾಗಿ ಕಂಟೈನ್ ಮೆಂಟ್ ವಲಯಗಳನ್ನು ತೆರಯಲಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 129ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.