Wednesday, August 17, 2022

Latest Posts

ಕೊಡಗು| 46 ಹೊಸ ಕೋವಿಡ್ ಪ್ರಕರಣಗಳು ದೃಢ: ಗುಣಮುಖರಾದವರು ಎಷ್ಟು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂಯ ವರದಿ, ಕೊಡಗು:

ಜಿಲ್ಲೆಯಲ್ಲಿ ಮಂಗಳವಾರ 46 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 110 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 10 ಸೋಮವಾರಪೇಟೆ ತಾಲೂಕಿನಲ್ಲಿ 15 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 21 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ‌ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 30,704ರಷ್ಟಾಗಿದ್ದು, ಈ ಪೈಕಿ ಇದುವರೆಗೆ ಒಟ್ಟು 29,784ಮಂದಿ ಗುಣಮುಖರಾಗಿದ್ದಾರೆ. 382 ಮಂದಿ ಸಾವಿಗೀಡಾಗಿದ್ದು, ಪ್ರಸಕ್ತ 538ಸಕ್ರಿಯ ಪ್ರಕರಣಗಳಿವೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 125ರಷ್ಟಿದ್ದು, ಮಂಗಳವಾರದ ಪಾಸಿಟಿವಿಟಿ ದರ ಶೇ.1.62ರಷ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!