Monday, August 8, 2022

Latest Posts

ಕೊಡಗು| ಜಿಲ್ಲೆಯಲ್ಲಿ 58 ಮಂದಿಗೆ ಕೋವಿಡ್ ಸೋಂಕು: ಗುಣಮುಖರ ಸಂಖ್ಯೆ ಎಷ್ಟು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಭಾನುವಾರ 58 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 15, ಸೋಮವಾರಪೇಟೆ ತಾಲೂಕಿನಲ್ಲಿ 29 ಹಾಗೂ ವೀರಾಜಪೇಟೆ 14 ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ33,965ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಗಳಲ್ಲಿ 64ಮಂದಿ ಸೋಂಕಿನಿಂದ ಮುಕ್ತರಾಗುವುದರೊಂದಿಗೆ ಇದುವರೆಗೆ ಒಟ್ಟು 32,978ಮಂದಿ ಗುಣಮುಖರಾದಂತಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 573ಸಕ್ರಿಯ ಪ್ರಕರಣಗಳಿದ್ದು, ಇದಯವರೆಗೆ 414ಮಂದಿ ಸಾವಿಗೀಡಾಗಿದ್ದಾರೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 79 ಹಾಗೂ ಪಾಸಿಟಿವಿಟಿ ದರ ಶೇ.1.94ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss