Thursday, July 7, 2022

Latest Posts

ಕೊಡಗು| 63 ಹೊಸ ಕೋವಿಡ್ ಪ್ರಕರಣ ದೃಢ, ಒಂದು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ,ಕೊಡಗು:
ಕೊಡಗು ಜಿಲ್ಲೆಯಲ್ಲಿ ಶನಿವಾರ 63 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 9, ಸೋಮವಾರಪೇಟೆ ತಾಲೂಕಿನಲ್ಲಿ 30, ವೀರಾಜಪೇಟೆ ತಾಲೂಕಿನಲ್ಲಿ 24 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ಅವರು ವಿವರಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 31275ರಷ್ಟಾಗಿದ್ದು,ಕಳೆದ 24 ಗಂಟೆಗಳಲ್ಲಿ 79 ಮಂದಿ ಗುಣಮುಖರಾಗುವುದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 30,553ರಷ್ಟಾಗಿದೆ.
ಪ್ರಸಕ್ತ ‌ಜಿಲ್ಲೆಯಲ್ಲಿ 331 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ ಒಬ್ಬರು ಸಾವಿಗೀಡಾಗಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 391ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 79 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ‌ ಶೇ.2.23ರಷ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss