ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಬುಧವಾರ 681 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 12 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 313, ಸೋಮವಾರಪೇಟೆ ತಾಲೂಕಿನಲ್ಲಿ 181 ವೀರಾಜಪೇಟೆ ತಾಲೂಕಿನಲ್ಲಿ 187 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 13,813 ರಷ್ಟಾಗಿದೆ ಎಂದು ಅವರು ವಿವರಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 396 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇದರೊಂದಿಗೆ ಒಟ್ಟು 9017 ಮಂದಿ ಗುಣಮುಖರಾದಂತಾಗಿದೆ. ಅಲ್ಲದೆ 4651 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 12 ಮಂದಿ ಸಾವಿಗೀಡಾಗುವುದರೊಂದಿಗೆ, ಒಟ್ಟು 145 ಮಂದಿ ಸಾವಿಗೀಡಾದಂತಾಗಿದೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 484 ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.