Saturday, July 2, 2022

Latest Posts

ಕೊಡಗು| ಮಂಗಳವಾರ 685 ಹೊಸ ಕೊರೋನಾ ಪ್ರಕರಣ ಪತ್ತೆ, 8 ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 658 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಪ್ರತಿನಿತ್ಯ 500ಕ್ಕಿಂತಲೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗುತ್ತಿರುವುದು ಮತ್ತು ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಮಂಗಳವಾರ ಮಡಿಕೇರಿ ತಾಲೂಕಿನಲ್ಲಿ 227, ಸೋಮವಾರಪೇಟೆ ತಾಲೂಕಿನಲ್ಲಿ 321, ವೀರಾಜಪೇಟೆ ತಾಲೂಕಿನಲ್ಲಿ 110 ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 13,132ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 576 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು 8621 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸಕ್ತ 4378 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳಲ್ಲಿ 8 ಮಂದಿ ಸಾವಿಗೀಡಾಗುವುದರೊಂದಿಗೆ ಒಟ್ಟು 133 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 484ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss