Wednesday, July 6, 2022

Latest Posts

ಕೊಡಗು| ಕೊರೋನಾ ಸೋಂಕು ಇಳಿಕೆ, ಸಾವಿನ ಸಂಖ್ಯೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಸೋಮವಾರ 89 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ. ಅಲ್ಲದೆ‌ ಕಳೆದ 24ಗಂಟೆಗಳಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಹಲವು ದಿನಗಳ ಬಳಿಕ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ ಶತಕದ ಕೆಳಗಿಳಿದಿದೆ. ಆದರೆ ಸಾವಿನ‌ ಸಂಖ್ಯೆ ಮತ್ತೆ ಏರಿಕೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 12, ಸೋಮವಾರಪೇಟೆ ತಾಲೂಕಿನಲ್ಲಿ 49, ವೀರಾಜಪೇಟೆ ತಾಲೂಕಿನಲ್ಲಿ 28 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 27,273ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 161ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು 25,229 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ.
ಪ್ರಸಕ್ತ ಜಿಲ್ಲೆಯಲ್ಲಿ 1695 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮೂರು ಮಂದಿ ಸಾವಿಗೀಡಾಗುವ ಮೂಲಕ ಸತ್ತವರ ಸಂಖ್ಯೆ 349ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 221ಹಾಗೂ ಪಾಸಿಟಿವಿಟಿ ದರ ಶೇ.4.6 ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss