Monday, August 15, 2022

Latest Posts

ಕೊಡಗಿನಲ್ಲಿ ಇಳಿಕೆ ಕಂಡ ಕೊರೋನಾ ಸೋಂಕಿತ ಪ್ರಕರಣಗಳು, ಸಾವಿನ ಪ್ರಮಾಣ ಸ್ಥಿರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿನ ಸಂಖ್ಯೆ 192ಕ್ಕೆ ಇಳಿಕೆಯಾಗಿದ್ದರೂ, ಕಳೆದ 24ಗಂಟೆಗಳಲ್ಲಿ 6 ಮಂದಿ ಸಾವಿಗೀಡಾಗಿದ್ದಾರೆ.
ಮಂಗಳವಾರ ಮಡಿಕೇರಿ ‌ತಾಲೂಕಿನಲ್ಲಿ 63, ಸೋಮವಾರಪೇಟೆ ತಾಲೂಕಿನಲ್ಲಿ 69 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 60 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಜಿಲ್ಲೆಯ ಮೂರು ತಾಲೂಕುಗಳಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿರುವುದು ಗೋಚರಿಸಿದೆ.
ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ 696ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ16,820ರಷ್ಟಾಗಿದ್ದು, 3546 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೋನಾ‌ ಸೋಂಕಿತರ ಒಟ್ಟು ಸಂಖ್ಯೆ 20620ರಷ್ಟಾಗಿದ್ದು, ಮಂಗಳವಾರ 6ಮಂದಿ ಸಾವಿಗೀಡಾಗುವುದರೊಂದಿಗೆ ಸೋಂಕಿಗೆ ಬಲೊಯಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಮಂಗಳವಾರ ಜಿಲ್ಲೆಯಲ್ಲಿ ಹೊಸದಾಗಿ 16 ಕಂಟೈನ್ ಮೆಂಟ್ ವಲಯಗಳನ್ನು ತೆರೆಯಲಾಗಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 451ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss