ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಶನಿವಾರ 99 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಮಡಿಕೇರಿ ತಾಲೂಕಿನಲ್ಲಿ 18, ಸೋಮವಾರಪೇಟೆ ತಾಲೂಕಿನಲ್ಲಿ 36 ವೀರಾಜಪೇಟೆ ತಾಲೂಕಿನಲ್ಲಿ 45 ಹೊಸ ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,205ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 361 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 45,690ಮಂದಿ ಸೋಂಕು ಮುಕ್ತರಾಗಿದ್ದಾರೆ. ಅಲ್ಲದೆ ಒಟ್ಟು 444 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 1071ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 132 ಹಾಗೂ ಪಾಸಿಟಿವಿಟಿ ದರ ಶೇ.8.97ರಷ್ಟಿರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.