ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ವೀಡಿಯೊ ಸಂವಾದ ಮೂಲಕ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣ ಸಂಬಂಧ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿ.ಪಂ.ಉಪ ಕಾರ್ಯದರ್ಶಿ ಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಡಾ.ಲೋಕೋಶ್, ಡಾ.ಗೋಪಿನಾಥ್, ಡಾ. ಆನಂದ್ ಮತ್ತಿತರರು ಇದ್ದರು.