spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು| ಸೆ. 17ರಿಂದ ಪ್ರೌಢಶಾಲೆ, ಕಾಲೇಜು ತರಗತಿಗಳು ಆರಂಭ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಮಡಿಕೇರಿ:

ಕೋವಿಡ್ ಕಾರಣದಿಂದ ಮುಚ್ಚಲ್ಪಟ್ಡಿದ್ದ ಕೊಡಗು‌ ಜಿಲ್ಲೆಯ‌ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಸೆ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.
ಪ್ರಸ್ತುತ ಕೆಲವು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇದ್ದು, ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಹಾಲಿ ಇರುವ ಪಾಸಿಟಿವಿಟಿ ದರವನ್ನು ಗಮನದಲ್ಲಿರಿಸಿಕೊಂಡು, ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಸುತ್ತೋಲೆಯನ್ನು ಆಧರಿಸಿ, ಕೊಡಗು ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ/ತಾಂತ್ರಿಕ/ಡಿಪ್ಲೊಮಾ ಕಾಲೇಜುಗಳ ಸ್ನಾತಕೋತ್ತರ ತರಗತಿಗಳನ್ನು; ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿಗಳನ್ನು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಪ್ರಮಾಣಿತ ಕಾರ್ಯಾಚರಣಾ ವಿಧಾನ ಪಾಲಿಸಿ ಪ್ರಾರಂಭಿಸುವ ಬಗ್ಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್-2005ರ ಕಲಂ 34 ಮತ್ತು ದಂಡಪ್ರಕ್ರಿಯಾ ಸಂಹಿತೆ 1973ರ ಕಲಂ144(3)ರಡಿಯಲ್ಲಿ ಪ್ರದತ್ತವಾದ ಅಧಿಕಾರದಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅದರಂತೆ ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ/ತಾಂತ್ರಿಕ/ಡಿಪ್ಲೊಮಾ ಕಾಲೇಜುಗಳ ಸ್ನಾತಕೋತ್ತರ ತರಗತಿಗಳನ್ನು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿನ 9 ಮತ್ತು 10ನೇ ತರಗತಿಗಳನ್ನು ಮತ್ತು ಪದವಿ ಪೂರ್ವ ಕಾಲೇಜುಗಳನ್ನು ಸಂಬಂಧಪಟ್ಟ ಇಲಾಖೆಗಳ ಸುತ್ತೋಲೆಯಂತೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಕೋವಿಡ್-19 SOP) ಪಾಲಿಸಿ ಸೆ. 17 ರಿಂದ ಪ್ರಾರಂಭಿಸಬಹುದಾಗಿದೆ.
ಹಿಂದುಳಿದ, ಅಲ್ಪ ಸಂಖ್ಯಾತರ, ಸಮಾಜ ಕಲ್ಯಾಣ ಇತ್ಯಾದಿ ಇಲಾಖೆಗಳ ಹಾಸ್ಟೆಲ್ ಗಳ ಅಧಿಕಾರಿ / ಸಿಬ್ಬಂದಿಗಳು ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರತಕ್ಕದ್ದು. ಮೇಲಿನ ಶಾಲಾ ಕಾಲೇಜು, ವಿದ್ಯಾ ಸಂಸ್ಥೆ ಮತ್ತು ಹಾಸ್ಟೆಲ್ ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡಬೇಕು.ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರಬೇಕು. ಪದವಿ ಮತ್ತು ಅದಕ್ಕೆ ಮೇಲ್ಪಟ್ಟ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರಬೇಕು ಎಂದೂ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿಗಳ ಪಾಲಕರು ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು.ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ / ಹಾಸ್ಟೆಲ್ ಗಳಲ್ಲಿ ಒಂದು ಕೊಠಡಿಯನ್ನು ಐಸೋಲೋಷನ್ ಕೊಠಡಿ ಆಗಿ ಕಾಯ್ದಿರಿಸಬೇಕು ಎಂದೂ ಅವರು ಹೇಳಿದ್ದಾರೆ.
ಬಸ್ ವ್ಯವಸ್ಥೆಗೆ ಕ್ರಮ: ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದಂತೆ ನಿಯಮಾನುಸಾರ ಸೂಕ್ತ ಕೆ.ಎಸ್.ಆರ್.ಟಿ.ಸಿ. / ಖಾಸಗಿ ಸಾರಿಗೆ ವ್ಯವಸ್ಥೆ ಬಗ್ಗೆ ಕ್ರಮವಹಿಸಬೇಕು ಎಂದಿರುವ ಅವರು,ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ನೀಡಲಿದೆ. ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 1860, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಆಕ್ಟ್ 2005ರಡಿ ಮತ್ತು ಸಂಬಂಧಪಟ್ಟ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದೂ ಅವರು ಎಚ್ಚರಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss