ಹೊಸದಿಗಂತ ವರದಿ, ಕೊಡಗು:
ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಾಗೂ ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡಿರುವ ‘ಫ್ರಂಟ್ ಲೈನ್ ವಾರಿಯರ್ಸ್’ಗಳಿಗೆ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಜಿಲ್ಲೆಯಾದ್ಯಂತ ಚಾಲನೆ ದೊರೆಯಿತು.
ಶಾಸಕ ಎಂ.ಪಿ.ಅಪ್ಪಚ್ವು ರಂಜನ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ವೆಂಕಟೇಶ ಅವರು ಸಮ್ಮುಖದಲ್ಲಿ ಸೋಮವಾರಪೇಟೆಯ ತಾಲೂಕು ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ವಿತರಣೆಗೆ ಚಾಲನೆ ನೀಡಲಾಯಿತು.
ಜಿಲ್ಲಾಡಳಿತದಿಂದ ಕಾರ್ಯಕ್ರಮ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಕಾರ್ಯಕ್ರಮದ ಉದ್ಘಾಟನೆಯನ್ನು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ರವಿಕುಶಾಲಪ್ಪ ಮಡಿಕೇರಿಯಲ್ಲಿ ನೆರವೇರಿಸಿದರು. ಜಿಲ್ಲಾಧಿಕಾರಿ ಡಾ: ಬಿ.ಸಿ. ಸತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ,ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಡಾ. ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿತ್ಸಕರು,ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಉಪಸ್ಥಿತರಿದ್ದರು.