spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು: ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 422ಕ್ಕೆ ಏರಿಕೆ

- Advertisement -Nitte

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಬುಧವಾರ 71 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 422ಕ್ಕೆ ಏರಿಕೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 53, ಸೋಮವಾರಪೇಟೆ ತಾಲೂಕಿನಲ್ಲಿ 11 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 34,415ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 35 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ ಒಟ್ಟು 33,419 ಮಂದಿ ಗುಣಮುಖರಾದಂತಾಗಿದೆÉ. ಜಿಲ್ಲೆಯಲ್ಲಿ ಪ್ರಸಕ್ತ 574 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಇದುವರೆಗೆ ಒಟ್ಟು 422 ಮಂದಿ ಸೋಂಕಿಗೆ ಬಲಿಯಾದಂತಾಗಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 55 ಹಾಗೂ ಪಾಸಿಟಿವಿಟಿ ದರ ಶೇ.1.95ರಷ್ಟಿದೆ ಎಂದು ಅವರು ವಿವರಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss