ನರ್ತಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ವುಮೆನ್ಸ್ ಫ್ರಂಟ್ ಒತ್ತಾಯ

ಹೊಸದಿಗಂತ ವರದಿ ಮಡಿಕೇರಿ:

ಕೊಳಕೇರಿಯಲ್ಲಿ ಬುರ್ಕಾ ಮತ್ತು ಶಿರವಸ್ತ್ರವನ್ನು ಧರಿಸಿ ನರ್ತಿಸಿದವರು ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ನ್ಯಾಷನಲ್ ವುಮೆನ್ಸ್ ಫ್ರಂಟ್‌ನ ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ನಗರ ಕಾರ್ಯದರ್ಶಿ ಹಝ್‍ಮಿಲಾ ಅವರು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮಹಿಳೆಯರ ಧಾರ್ಮಿಕ ಉಡುಪು ಹಾಗೂ ಶಿರವಸ್ತ್ರವನ್ನು ಧರಿಸಿ ನರ್ತಿಸುವ ಮೂಲಕ ಇಸ್ಲಾಂ ಧರ್ಮಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿದರು.

ಕೊಡಗಿನಲ್ಲಿ ಬಜರಂಗದಳ, ವಿ.ಹೆಚ್.ಪಿ ಹಾಗೂ ಆರ್‍ಎಸ್‍ಎಎಸ್‌ನಿಂದ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ನಿರಂತರ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಪೊಲೀಸ್ ಇಲಾಖೆ ಯಾವುದೇ ತಾರತಮ್ಯ ಧೋರಣೆಯನ್ನು ತೋರದೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಸಂಬಂಧಿಸಿದವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.

ಎಸ್‍ಕೆಎಸ್‍ಎಸ್‍ಎಫ್ ಒತ್ತಾಯ:

ವೆಸ್ಟ್ ಕೊಳಕೇರಿ ಗ್ರಾಮಾಭಿವೃದ್ಧಿ ಸಂಘದ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಬುರ್ಕಾ ಮತ್ತು ಶಿರವಸ್ತ್ರ ಧರಿಸಿ ನೃತ್ಯ ಮಾಡುವ ಮೂಲಕ ಮುಸಲ್ಮಾನರ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ಎಸ್.ಕೆ.ಎಸ್.ಎಸ್.ಎಫ್ ನ ಕೊಡಗು ಜಿಲ್ಲಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ. ಯಾವುದೇ ಧರ್ಮವು ಅನ್ಯ ಧರ್ಮವನ್ನು ಹಾಗೂ ಅದರ ಆಚಾರ ವಿಚಾರಗಳನ್ನು ಅವಹೇಳನ ನಡೆಸಲು ಹೇಳುವುದಿಲ್ಲ. ಬದಲಾಗಿ ಎಲ್ಲಾ ಧರ್ಮಗಳನ್ನು ಗೌರವಿಸಲು ಹೇಳುತ್ತದೆ. ಕೊಳಕೇರಿ ಪ್ರಕರಣದಲ್ಲಿ ಇಸ್ಲಾಂ ಧರ್ಮದ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿರುವುದರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!