ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ಕೊಡಗು ಜಿಲ್ಲಾ ಪಾಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಾಂತ್ರಿಕ ಸಹಾಯಕರು ಮತ್ತು ತಾಲ್ಲೂಕು ಐ.ಇ.ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೂಲಕ ಜನವರಿ 7,2023 ರಿಂದ ಜನವರಿ 23,2023ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾ‍ರ್ಹತೆ :

ಕೊಡಗು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕರು ಮತ್ತು ತಾಲ್ಲೂಕು ಐ.ಇ.ಸಿ ಹುದ್ದೆಗಳಿಗೆ ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ :

ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಈ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://kodagu.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 7,2023 ರಿಂದ ಜನವರಿ 23,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!