Sunday, August 14, 2022

Latest Posts

ಟೋಕಿಯೋ ಒಲಂಪಿಕ್ಸ್| ಭಾರತ ಸೀನಿಯರ್ ಮಹಿಳಾ ಹಾಕಿ ತಂಡದ ಕೋಚ್ ಆಗಿ ಕೊಡಗಿನ ಅಂಕಿತಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕ್ರೀಡಾ ಜಿಲ್ಲೆಯಾಗಿರುವ ಕೊಡಗು ಇದೀಗ ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ರಾಷ್ಟ್ರದ ಗಮನ ಸೆಳೆದಿದೆ.
ಕೊಡಗಿನ ಹಾಕಿ ಕಲಿಯೊಬ್ಬರು ಜಪಾನಿನ ಟೋಕಿಯೋದಲ್ಲಿ ನಡೆಯಲಿರುವ ಒಲಂಪಿಕ್ಸ್ ನಲ್ಲಿ ಭಾರತದ ಸೀನಿಯರ್ ಮಹಿಳಾ ಹಾಕಿ ತಂಡದ ಕೋಚ್ ಆಗಿ ದೇಶವನ್ನು ಪ್ರತಿನಿಧಿಸಲಿದ್ದಾರೆ.
ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯ ಹೊನ್ನಂಪಾಡಿ ಅಂಕಿತಾ ಸುರೇಶ್ ಅವರೇ ಈ ಸಲದ ಒಲಂಪಿಕ್ಸ್ ನಲ್ಲಿ ಮಹಿಳಾ ಹಾಕಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಕೋಚ್ ಅಂಕಿತಾ ಅವರನ್ನೊಳಗೊಂಡ ಭಾರತದ ಮಹಿಳಾ ಹಾಕಿ ತಂಡ ಟೋಕಿಯೋಗೆ ಪ್ರಯಾಣ ಬೆಳೆಸಿದೆ.
ಅಂಕಿತಾ ಅವರು ಕಂಬಿಬಾಣೆಯ ಹೊನ್ನಂಪಾಡಿ ಸುರೇಶ್ ಕುಶಾಲಪ್ಪ ಅವರ ಪತ್ನಿ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss