ಹೊಸದಿಗಂತ ಆನ್ ಲೈನ್ ಡೆಸ್ಕ್:
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಕೋಡಿ ಹಳ್ಳಿ ಚಂದ್ರಶೇಖ್, ಸರ್ಕಾರ ತಮ್ಮ ಹೋರಾಟವನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.