JOB| ಕರ್ನಾಟಕ ತೈಲ ಒಕ್ಕೂಟ ರಾಯಚೂರು ನೇಮಕಾತಿ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ತೈಲ ಒಕ್ಕೂಟ ರಾಯಚೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಕರ್ನಾಟಕ ತೈಲ ಒಕ್ಕೂಟ ರಾಯಚೂರಿನಲ್ಲಿ ಒಟ್ಟು 16 ಎಕ್ಸಿಕ್ಯೂಟಿವ್, ಅಸಿಸ್ಟೆಂಟ್, ಫೀಲ್ಡ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು.

ಬಿ.ಎಸ್ಸಿ, ಎಂಎಸ್ಸಿ (ಅಗ್ರಿ) ವಿದ್ಯಾರ್ಹತೆ ಜೊತೆಗೆ ಏಪ್ರಿಲ್ 10, 2023ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಏಪ್ರಿಲ್‌ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!