ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ -ಅನುಷ್ಕಾ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ನಟಿ ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಲು ಸಜ್ಜಾಗಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸಿಹಿ ಸುದ್ದಿ ಸಿಕ್ಕಿದೆ.

ಈ ಕುರಿತು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಮಾಹಿತಿ ನೀಡಿದ್ದು,ವಿರಾಟ್ ಕೊಹ್ಲಿ ಆರೋಗ್ಯವಾಗಿದ್ದಾರೆ ಮತ್ತು ಅವರ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ ಎಂದು ಎಬಿ ಡಿವಿಲಿಯರ್ಸ್ ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ತಿಳಿಸಿದರು. ವಿರಾಮದ ಸಮಯದಲ್ಲಿ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಇರಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ

ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ಜನನವನ್ನು ನಿರೀಕ್ಷಿಸುತ್ತಿದ್ದಾರೆ .ಈಗಾಗಲೇ ಈ ದಂಪತಿಗೆ ಮೊದಲ ಮಗುವಾಗಿ ವಾಮಿಕಾ ಎಂಬ ಮಗಳಿದ್ದಾಳೆ. ಮುದ್ದು ವಾಮಿಕಾ ಜನವರಿ 2021 ರಲ್ಲಿ ಜನಿಸಿದ್ದರು.

ಈಗಾಗಲೇ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!