ಗಂಡು ಮಗುವನ್ನು ಬರಮಾಡಿಕೊಂಡ ಕೊಹ್ಲಿ-ಅನುಷ್ಕಾ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಂಪತಿ 2ನೇ ಮಗುವನ್ನು ಬರಮಾಡಿಕೊಂಡಿದ್ದಾರೆ.

ಈ ಕುರಿತು ವಿರಾಟ್ ಕೊಹ್ಲಿ ಸಂತಸ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಫೆಬ್ರವರಿ 15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಬ್ಬರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿಯನ್ನು ಕೊಹ್ಲಿ ಬಹಿರಂಗಪಡಿಸಿದ್ದಾರೆ.

ಇದೇ ವೇಳೆ ವಮಿತಾ ತಮ್ಮನಿಗೆ ಮುದ್ದಾದ ಹೆಸರನ್ನು ಘೋಷಿಸಿದ್ದಾರೆ. ಮಗುವಿಗೆ “ಅಕಾಯ್” ಎಂದು ಹೆಸರಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ, ಎಲ್ಲರ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಇರಲಿ. ಇದೇ ವೇಳೆ ನಮ್ಮ ಖಾಸಗಿ ಸಮಯವನ್ನು ಗೌರವಿಸಬೇಕಾಗಿ ಎಂದು ವಿರುಷ್ಕಾ ದಂಪತಿ ಮನವಿ ಮಾಡಿದ್ದಾರೆ.

ವಿರಾಟ್ ಕೊಹ್ಲಿ 2ನೇ ಮಗುವಿನ ನಿರೀಕ್ಷೆಯಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಿಂದ ವಿಶ್ರಾಂತಿ ಪಡೆದು ಕುಟುಂಬದ ಜೊತೆಗಿದ್ದರು. ಫೆಬ್ರವರಿ 15 ರಂದೇ ವಿರುಷ್ಕಾ ದಂಪತಿ 2ನೇ ಮಗುವಿನ ತಂದೆಯಾಗಿದ್ದಾರೆ. 5 ದಿನದ ಬಳಿಕ ಈ ಮಾಹಿತಿಯನ್ನು ವಿರಾಟ್ ಕೊಹ್ಲಿ ಬಹಿರಂಗಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!