ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಮತ್ತು 19 ವರ್ಷದ ಸ್ಯಾಮ್ ಕಾನ್ಸ್ಟಸ್ ನಡುವೆ ಕಿತ್ತಾಟ ನಡೆದಿದೆ.
ಇಬ್ಬರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಂತೆ ಅಂಪೈರ್‌ಗಳು ಮತ್ತು ಇತರ ಆಟಗಾರರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವಿನ ಕಿತ್ತಾಟದ ವಿಡಿಯೋ ವೈರಲ್ ಆಗಿದೆ.
ಜಸ್ಪ್ರೀತ್ ಬುಮ್ರಾ ಇನಿಂಗ್ಸ್‌ನ 11ನೇ ಓವರ್ ಎಸೆಯುತ್ತಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ಕೀಪರ್ ಪಂತ್ ಕಡೆಗೆ ಬಾಲ್ ಹಿಡಿದುಕೊಂಡು ಬರುತ್ತಿದ್ದಾಗ ಇಂದು ಟೆಸ್ಟ್ ಕ್ಯಾಪ್ ಧರಿಸಿದ ಸ್ಯಾಮ್‌ಗೆ ಭುಜದಿಂದ ಡಿಕ್ಕಿ ಹೊಡೆದಿದ್ದಾರೆ. ಕೂಡಲೇ ಸಿಟ್ಟಾದ ಸ್ಯಾಮ್ ಕೊಹ್ಲಿಯನ್ನು ದಿಟ್ಟಿಸಿ ನೋಡಿದ್ದಾರೆ. ಈ ವೇಳೆ ಕೊಹ್ಲಿ ಸ್ಯಾಮ್ ಜೊತೆ ಜಗಳಕ್ಕೆ ಇಳಿದಿದ್ದಾರೆ. ಕೊನೆಗೆ ಆರಂಭಿಕ ಆಟಗಾರ ಖವಾಜ ಹಾಗೂ ಅಂಪೈರ್‌ಗಳು ಬಂದು ಇಬ್ಬರನ್ನು ಸಮಾಧಾನ ಮಾಡಿದ್ದಾರೆ.
Virat Kohli and Sam Konstas exchanged a heated moment on the MCG. #AUSvIND pic.twitter.com/QL13nZ9IGI
— cricket.com.au (@cricketcomau) December 26, 2024