ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿರಾಟ್ ಕೊಹ್ಲಿ ಅವರ ಭರ್ಜರಿ ಶತಕ, ರೋಹಿತ್, ಗಿಲ್, ರಾಹುಲ್ ಸಾಥ್ ಉತ್ತಮ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ 4ನೇ ಗೆಲುವು ತನ್ನದಾಗಿಸಿಕೊಂಡಿದೆ.
ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಮಣಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮುಂದುವರಿದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 8 ವಿಕೆಟ್‌ಗೆ 256 ರನ್ ಪೇರಿಸಿದರೆ, ಪ್ರತಿಯಾಗಿ ಟೀಮ್ ಇಂಡಿಯಾ 41.3 ಓವರ್‌ಗಲ್ಲಿ 4 ವಿಕೆಟ್ ನಷ್ಟಕ್ಕೆ 261 ರನ್ ಬಾರಿಸಿ 4ನೇ ಗೆಲುವು ಕಂಡಿತು.
ನಾಯಕ ರೋಹಿತ್ ಶರ್ಮ 40 ಎಸೆತಗಳ 48 ರನ್ ಬಾರಿಸಿದರು. ಆರಂಭಿಕರಾಗಿ ಕಣಕ್ಕಿಳಿದ್ದ ಶುಭ್‌ಮನ್ ಗಿಲ್ 55 ಎಸೆತಗಳಲ್ಲಿ 5 ಬೌಂಡರಿ, 2 ಸಿಕ್ಸರ್‌ಗಳ ಅರ್ಧಶತಕ ಸಿಡಿಸಿದರು. ಶ್ರೇಯಸ್ ಅಯ್ಯರ್ 19 ರನ್ ಮಾಡಿದರೆ, ಕೆಎಲ್ ರಾಹುಲ್ ಅಜೇಯ 34 ರನ್ ಬಾರಿಸಿ ಕೊಹ್ಲಿಯ ಶತಕಕ್ಕೆ ಜೊತೆಯಾದರು.