ಕೊಹ್ಲಿ 71ನೇ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ ಎಂದ ಅಭಿಮಾನಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

`ಕೊಹ್ಲಿ 71ನೇ ಅಂತಾರಾಷ್ಟ್ರೀಯ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ’ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.
ಹೌದು, ಕೊಹ್ಲಿ ಎರಡು ವರ್ಷಗಳಿಂದ ಒಂದೇ ಒಂದು ಅಂತಾರಾಷ್ಟ್ರೀಯ ಶತಕ ಗಳಿಸಿಲ್ಲ. ಕೊಹ್ಲಿ ಅವರ ಹಿಂದಿನ ಶತಕವು 2019 ರಲ್ಲಿ ಈಡನ್ ಗಾರ್ಡನ್ಸ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ 136 ರನ್ ಗಳಿಸಿದಾಗ ಬಂದಿತ್ತು. ಅದಾದ ಬಿಳಿಕ ಯಾವುದೇ ಹಿಟ್ ರನ್ ನೀಡುವಲ್ಲಿ ಕೊಹ್ಲಿ ವಿಫಲರಾಗಿದ್ದಾರೆ.
ಇನ್ನು ಅವರ 100 ನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುತ್ತಾರೆ ಎಂಬ ಕಾತುರ ಅಭಿಮಾನಿಗಳಲ್ಲಿ ಇತ್ತು. ಆದರೆ ಅವರು 45 ರನ್ ಗಳಿಸಿ ಔಟಾದರು.
ಹೀಗಾಗಿ ಅಭಿಮಾನಿಯೊಬ್ಬ ಕ್ರೀಡಾಂಗಣದಲ್ಲಿ ಪ್ಲೆಕಾರ್ಡ್ ಹಿಡಿದು ಬಂದಿದ್ದು, ಸಾಕಷ್ಟು ಗಮನ ಸೆಳೆದಿದೆ. ಅದರಲ್ಲಿ ತಾನು `ಕೊಹ್ಲಿ 71ನೇ ಅಂತಾರಾಷ್ಟ್ರೀಯ ಶತಕ ಗಳಿಸುವವರೆಗೆ ಮದುವೆಯಾಗುವುದಿಲ್ಲ’ ಎಂದು ಬರೆದಿದ್ದಾನೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 70 ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ (100 ಶತಕ) ಮತ್ತು ರಿಕಿ ಪಾಂಟಿಂಗ್ (71 ಶತಕ) ಪಟ್ಟಿಯಲ್ಲಿ ಕೊಹ್ಲಿಗಿಂತ ಮುಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!