ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 19ನೇ ಸೀಸನ್‌ನ ರಂಗು ಏರುತ್ತಿದ್ದಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಸಿದ್ದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಇದೀಗ 2026ರ ಐಪಿಎಲ್ ಅಭಿಯಾನಕ್ಕಾಗಿ ಭಾರತಕ್ಕೆ ಮರಳಿದ್ದಾರೆ.
ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ವಿರಾಟ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಹಿಂದೆ ಲಂಡನ್‌ನಲ್ಲೇ ಐಪಿಎಲ್‌ಗಾಗಿ ಕಠಿಣ ತಾಲೀಮು ನಡೆಸುತ್ತಿದ್ದ ಕೊಹ್ಲಿ ಅವರ ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರು ಶೀಘ್ರದಲ್ಲೇ ಆರ್‌ಸಿಬಿ ಶಿಬಿರವನ್ನು ಸೇರಿಕೊಳ್ಳಲಿದ್ದು, ತಮ್ಮ ಭರ್ಜರಿ ಬ್ಯಾಟಿಂಗ್ ಅಭ್ಯಾಸವನ್ನು ಮುಂದುವರಿಸಲಿದ್ದಾರೆ.
ಕಳೆದ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿ ಇತಿಹಾಸ ನಿರ್ಮಿಸಿದ್ದ ಆರ್‌ಸಿಬಿ ಮೇಲೆ ಈ ಬಾರಿ ನಿರೀಕ್ಷೆಯ ಬೆಟ್ಟವೇ ಇದೆ. ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿರುವ ಬೆಂಗಳೂರು ತಂಡಕ್ಕೆ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ದೊಡ್ಡ ಜವಾಬ್ದಾರಿಯಿದೆ. ಹೀಗಾಗಿ ತಂಡದ ಆಧಾರಸ್ತಂಭ ವಿರಾಟ್ ಕೊಹ್ಲಿ ಅವರಿಂದ ಈ ಬಾರಿಯೂ ಸ್ಫೋಟಕ ಪ್ರದರ್ಶನವನ್ನು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.



