ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಕ್ಕೆ ಇಲ್ಲ ಕೊಹ್ಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯು ಗುರುವಾರ, ಜನವರಿ 25 ರಂದು ಹೈದರಾಬಾದ್‌ನಲ್ಲಿ ಪ್ರಾರಂಭವಾಗಲಿದೆ.

ನಾಯಕ ರೋಹಿತ್ ಶರ್ಮಾ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರೊಂದಿಗೆ ವಿರಾಟ್ ಮಾತನಾಡಿದ್ದಾರೆ. ದೇಶವನ್ನು ಪ್ರತಿನಿಧಿಸುವುದು ಯಾವಾಗಲೂ ತನ್ನ ಪ್ರಮುಖ ಆದ್ಯತೆಯಾಗಿದೆ, ಕೆಲವು ವೈಯಕ್ತಿಕ ಸನ್ನಿವೇಶಗಳು ಅವರ ಉಪಸ್ಥಿತಿ ಬಯಸುತ್ತವೆ. ಹೀಗಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ದೂರ ಉಳಿದಿದ್ದಾರೆ.ಮೊದಲೆರಡು ತಂಡದಲ್ಲಿ ಕೊಹ್ಲಿಯ ಬದಲಿಗೆ ಮೂರು ಆಟಗಾರರ ಆಯ್ಕೆ ಮಾಡಲಾಗಿದೆ.

ಮೊದಲ ಎರಡು ಟೆಸ್ಟ್‌ ಗಳಿಗೆ ಭಾರತ ತಂಡ:

ರೋಹಿತ್ ಶರ್ಮಾ(ಸಿ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಡಬ್ಲ್ಯುಕೆ), ಕೆಎಸ್ ಭರತ್(ಡಬ್ಲ್ಯುಕೆ), ಧ್ರುವ್ ಜುರೆಲ್(ಡಬ್ಲ್ಯುಕೆ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ(ವಿಸಿ), ಅವೇಶ್ ಖಾನ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!