ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ ಟೂರ್ನಿಯಯನ್ನು ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ.ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ದಿಟ್ಟ ಹೋರಾಟ ಗೆಲುವಿನ ಸಿಹಿ ನೀಡಿತು.
ಆರಂಭದಲ್ಲೇ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ವಿಕೆಟ್ ಕಳೆದುಕೊಂಡ ತಂಡ ಆಘಾತಕ್ಕೊಳಗಾಗಿತ್ತು. ಈ ಕ್ಷಣ ತಂಡಕ್ಕೆ ಕೊಹ್ಲಿ ಹಾಗೂ ರಾಹುಲ್ ಜೊತೆಯಾಟ ಆಸರೆಯಾಗಿದ್ದು, ಗೆಲುವು ತಂದುಕೊಟ್ಟಿದ್ದಾರೆ.
ಕೊಹ್ಲಿ 85 ರನ್ ಸಿಡಿಸಿ ಔಟಾದರು. ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್ ಮೂಲಕ ಟಾರ್ಗೆಟ್ ಚೇಸ್ ಮಾಡಿದರು. ಕೆಎಲ್ ರಾಹುಲ್ ಭರ್ಜರಿ ಸಿಕ್ಸರ್ ಸಿಡಿಸಿ ಭಾರತಕ್ಕೆ 6 ವಿಕೆಟ್ ಗೆಲುವು ತಂದುಕೊಟ್ಟರು.
ಕೆಎಲ್ ರಾಹುಲ್ ಅಜೇಯ 97 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ ಅಜೇಯ 11 ರನ್ ಸಿಡಿಸಿದರು.