ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಐಸಿಸಿ ಟಿ 20 ಶ್ರೇಯಾಂಕದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ ಅಗ್ರ ಹತ್ತರೊಳಗೆ ಮುಂದುವರೆದಿದ್ದಾರೆ.
ಐದನೇ ಸ್ಥಾನದಲ್ಲಿ ಕೊಹ್ಲಿ, ಆರನೇ ಸ್ಥಾನದಲ್ಲಿ ರಾಹುಲ್ ಇದ್ದಾರೆ.
ಪ್ರಸ್ತುತ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ ಟಿ-ಟ್ವೆಂಟಿ ಸರಣಿಯಲ್ಲಿ ಇಬ್ಬರೂ ಆಡದಿದ್ದರು, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಬೌಲರ್ಗಳ ವಿಭಾಗದಲ್ಲಿ ಭಾರತ ತಂಡದ ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ 16ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ 10 ಸ್ಥಾನ ಬಡ್ತಿ ಪಡೆಯುವ ಮೂಲಕ 21ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಹಂಗಾಮಿ ನಾಯಕ ಶಿಖರ್ ಧವನ್ ಬ್ಯಾಟ್ಸ್ಮನ್ ವಿಭಾಗದಲ್ಲಿ 29ನೇ ಸ್ಥಾನ ಪಡೆದಿದ್ದಾರೆ.