spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತ ತಂಡದ ನಾಯಕತ್ವ ತೊರೆಯಲಿದ್ದಾರಾ ಕೊಹ್ಲಿ? ಬಿಸಿಸಿಐ ಹೇಳಿದ್ದೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ. ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ವರದಿಗಳು ಎಲ್ಲೆಡೆ ಹರಿದಾಡುತ್ತಿದ್ದು, ಈ ಕುರಿತು ಬಿಸಿಸಿಐ ಸ್ಪಷ್ಟನೆ ನೀಡಿದೆ.
ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ.ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ.
ಮಾಧ್ಯಮ ವರದಿ ನಿಜವಲ್ಲ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ಬದಲಾಯಿಸುವ ಬಗ್ಗೆ ಬಿಸಿಸಿಐ ಯಾವುದೇ ಸಭೆ ನಡೆಸಿಲ್ಲ ಹಾಗೂ ಚರ್ಚಿಸಿಯೂ ಇಲ್ಲ ಎಂದು ಧುಮಲ್ ಹೇಳಿದ್ದಾರೆ.
ಕೊಹ್ಲಿ ಅವರು ಟೆಸ್ಟ್‌ ಕ್ರಿಕೆಟ್ ನಾಯಕತ್ವದಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಉತ್ತಮ ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳನ್ನು ತಂಡ ಹೊಂದಿದ್ದರೂ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಐಸಿಸಿ ಪ್ರಮುಖ ಟೂರ್ನಿಗಳಲ್ಲಿ ತಂಡವನ್ನು ಗೆಲ್ಲಿಸುವುದು ಕೊಹ್ಲಿಗೆ ಸಾಧ್ಯವಾಗಿಲ್ಲ. ಹೀಗಾಗಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಂಡದ ನಾಯಕತ್ವ ರೋಹಿತ್ ಪಾಲಾಗುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss