Monday, August 8, 2022

Latest Posts

ಕೋಲ್ಕತ್ತಾ ವಿರುದ್ಧ ಟಾಸ್​ ಗೆದ್ದ ಕೊಹ್ಲಿ ಬ್ಯಾಟಿಂಗ್ ಆಯ್ಕೆ: ಭರತ್, ಹಸರಂಗ ಪದಾರ್ಪಣೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಐಪಿಎಲ್​ನ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟೂರ್ನಿಯಲ್ಲಿ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಕಂಡಿರುವ ಆರ್​ಸಿಬಿ 10 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್​ 7 ಪಂದ್ಯಗಳಿಂದ 2 ಗೆಲುವು ಮತ್ತು 5 ಸೋಲುಗಳೊಂದಿಗೆ 7ನೇ ಸ್ಥಾನ ಪಡೆದುಕೊಂಡಿದೆ. ಆರ್​ಸಿಬಿ ಈ ಪಂದ್ಯವನ್ನು ಗೆದ್ದು ಪ್ಲೇ ಆಫ್​ ಹಂತಕ್ಕೆ ಮತ್ತಷ್ಟು ಹತ್ತಿರವಾಗುವ ಆಶಯದಲ್ಲಿದ್ದರೆ, ಕೆಕೆಆರ್ ಪ್ಲೇ ಆಫ್​ ದೃಷ್ಟಿಯಿಂದ ಉಳಿದೆಲ್ಲಾ ಪಂದ್ಯಗಳನ್ನು​ ಗೆಲ್ಲಲೇಬೇಕಿದೆ.
ಈ ಪಂದ್ಯದಲ್ಲಿ ಶ್ರೀಲಂಕಾದ ಸ್ಟಾರ್​ ಆಲ್​ರೌಂಡರ್​ ವನಿಂದು ಹಸರಂಗ ಮತ್ತು ವಿಕೆಟ್​ ಕೀಪರ್ ಕೆಎಸ್​ ಭರತ್​ ಆರ್​ಸಿಬಿ ಪರ ಐಪಿಎಲ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ ಪದಾರ್ಪಣೆ ಮಾಡುತ್ತಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕಾರ್ ಭರತ್, ಗ್ಲೇನ್ ಮ್ಯಾಕ್ಸ್​ವೆಲ್, ಎಬಿ ಡಿ ವಿಲಿಯರ್ಸ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸಚಿನ್ ಬೇಬಿ, ಕೈಲ್ ಜೇಮೀಸನ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್
ಕೋಲ್ಕತ್ತಾ ನೈಟ್​ ರೈಡರ್ಸ್: ಶುಭಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೀ), ಸುನೀಲ್ ನರೈನ್, ವೆಂಕಟೇಶ್ ಅಯ್ಯರ್, ಲಾಕಿ ಫ ಸನ್, ವರ್ಗ್ಯುಸನ್ ಚಕ್ರವರ್ತಿ, ಪ್ರಸಿಧ್ ಕೃಷ್ಣ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss