ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲ್ಯಾಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.
ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 300 ರನ್ಗಳಿಸಿತ್ತು. 301 ರನ್ಗಳ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ ಇನ್ನು ಒಂದು ಓವರ್ ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ವಿರಾಟ್ ಕೊಹ್ಲಿ (93), ಶುಭ್ಮನ್ ಗಿಲ್ (56) ಸಿಡಿಸಿದ ಅರ್ಧಶತಕ ಹಾಗೂ ಶ್ರೇಯಸ್ ಅಯ್ಯರ್ (49), ಕೆಎಲ್ ರಾಹುಲ್ (ಅಜೇಯ29) ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
301 ರನ್ಗಳ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ, ರೋಹಿತ್ ಶರ್ಮಾ 29 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 26 ರನ್ ಸಿಡಿಸಿ ಔಟ್ ಆದರು. ನಂತರ ಒಂದುಗೂಡಿದ ವಿರಾಟ್ ಕೊಹ್ಲಿ ಹಾಗೂ ಕ್ಯಾಪ್ಟನ್ ಗಿಲ್ 2ನೇ ವಿಕೆಟ್ ಜೊತೆಯಾಟದಲ್ಲಿ 107 ಎಸೆತಗಳಲ್ಲಿ 118 ರನ್ಗಳ ಜೊತೆಯಾಟ ನೀಡಿದರು. ಏಕದಿನ ಸರಣಿಗೆ ಕಮ್ಬ್ಯಾಕ್ ಮಾಡಿದ್ದ ಗಿಲ್ 71 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ಗಳ ಸಹಿತ 56 ರನ್ಗಳಿಸಿ ಔಟ್ ಆದರು.
ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ಸಹಿತ 93 ರನ್ಗಳಿಸಿ ಕೇವಲ 7 ರನ್ಗಳಿಂದ ಶತಕ ಮಿಸ್ ಮಾಡಿಕೊಂಡರು. 49 ರನ್ಗಳಿಸಿದ್ದ ಅಪಾಯಕಾರಿ ಬ್ಯಾಟರ್ ಶ್ರೇಯಸ್ ಅಯ್ಯರ್ರನ್ನ ಕ್ಲೀನ್ ಬೌಲ್ಡ್ ಆದರು. ನಂತರ ಬಂದ ಹರ್ಷಿತ್ ರಾಣಾ ಕೇವಲ 23 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 29 ರನ್ಗಳಿಸಿ ಭಾರತದ ಗೆಲುವಿನ ಹಾದಿಯನ್ನ ಸುಗಮಗೊಳಿಸಿ ಔಟ್ ಆದರು. ಕೊನೆಯಲ್ಲಿ ಕನ್ನಡಿಗ ಕೆಎಲ್ ರಾಹುಲ್ 21 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ ಅಜೇಯ 29 ರನ್ಗಳಿಸಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು.

