Tuesday, March 28, 2023

Latest Posts

ಕೊಹ್ಲಿ ಭರ್ಜರಿ ಆಟ: ಟೀಂ ಇಂಡಿಯಾ 571 ರನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಾಜಿ ನಾಯಕ ವಿರಾಟ್ ಕೊಹ್ಲಿ ಶತಕ ಹಾಗೂ ಅಕ್ಷರ್ ಪಟೇಲ್‌ ಮಿಂಚಿನ ಆಟದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ 571 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 91 ರನ್‌ಗಳ ಇನಿಂಗ್ಸ್‌ ಮುನ್ನಡೆ ಗಳಿಸಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ 191 ರನ್‌ಗಳ ಇನಿಂಗ್ಸ್‌ ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ರವೀಂದ್ರ ಜಡೇಜಾ 28 ರನ್ ಬಾರಿಸಿ ಟೋಡ್ ಮರ್ಫಿಗೆ ವಿಕೆಟ್‌ ಒಪ್ಪಿಸಿದರು.

ಇದಾದ ಬಳಿಕ 5ನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಕೆ ಎಸ್ ಭರತ್ 180 ಎಸೆತಗಳನ್ನು ಎದುರಿಸಿ 84 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 390ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.44 ರನ್ ಬಾರಿಸಿ ಚೊಚ್ಚಲ ಅರ್ಧಶತಕದಆಸೆಯಲಿದ್ದ ಭರತ್‌ ಪೆವಿಲಿಯನ್ ಸೇರಿದರು.

ಇತ್ತ ಮಾಜಿ ನಾಯಕ ವಿರಾಟ್ ಕೊಹ್ಲಿ ಬರೋಬ್ಬರಿ 40 ತಿಂಗಳುಗಳ ಬಳಿಕ ಟೆಸ್ಟ್‌ ಕ್ರಿಕೆಟ್‌ನಲ್ಲಿ ಶತಕ ಸಿಡಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ವಿರಾಟ್ ಕೊಹ್ಲಿ 364 ಎಸೆತಗಳನ್ನು ಎದುರಿಸಿ 15 ಬೌಂಡರಿ ಸಹಿತ 186 ರನ್‌ ಬಾರಿಸಿ ನೇಥನ್ ಲಯನ್‌ಗೆ ವಿಕೆಟ್‌ ಒಪ್ಪಿಸಿದರು.

ವಿಕೆಟ್‌ ಕೀಪರ್ ಕೆ ಎಸ್ ಭರತ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಅಕ್ಷರ್ ಪಟೇಲ್‌, ವಿರಾಟ್ ಕೊಹ್ಲಿ ಜತೆಗೂಡಿ ಆರನೇ ವಿಕೆಟ್‌ಗೆ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಕೊಹ್ಲಿ-ಅಕ್ಷರ್ ಜೋಡಿ 215 ಎಸೆತಗಳನ್ನು ಎದುರಿಸಿ 162 ರನ್‌ಗಳ ಜತೆಯಾಟವಾಡುವ ಮೂಲಕ ಟೀಂ ಇಂಡಿಯಾಗೆ ಇನಿಂಗ್ಸ್‌ ಮುನ್ನಡೆ ಒದಗಿಸಿಕೊಡುವಲ್ಲಿ ಯಶಸ್ವಿಯಾದರು. ಅಕ್ಷರ್ ಪಟೇಲ್‌ 113 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 79 ರನ್‌ ಬಾರಿಸಿ ಮಿಚೆಲ್ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!