ಕೊಹ್ಲಿ ಆಕರ್ಷಕ ಶತಕ, ರೋಹಿತ್-ಗಿಲ್ ಬೊಂಬಾಟ್ ಆಟ: ಶ್ರೀಲಂಕಾಕ್ಕೆ ಬೃಹತ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿರಾಟ್ ಕೊಹ್ಲಿ ಆಕರ್ಷಕ ಶತಕ, ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಜೋಡಿ ನೀಡಿದ ಆರಂಭಿಕ ಅಡಿಪಾಯದ ನೆರವಿನಿಂದ ಟೀಂ ಇಂಡಿಯಾ ಮೊದಲ ಏಕದಿನ ಪಂದ್ಯದಲ್ಲಿ 7 ವಿಕೆಟ್‌ ಕಳೆದುಕೊಂಡು 373 ರನ್‌ ಬಾರಿಸಿದ್ದು, ಲಂಕಾಗೆ ಬೃಹತ್ ಟಾರ್ಗೆಟ್ ನೀಡಿದೆ.

ಬರ್ಸಾಪುರ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡರು. ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಭರ್ಜರಿ ಆರಂಭವನ್ನೇ ಪಡೆಯಿತು. ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್‌ ಗಿಲ್‌ ಜೋಡಿ 143 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಭದ್ರಬುನಾದಿ ಹಾಕಿ ಕೊಟ್ಟರು.

ಶುಭ್‌ಮನ್‌ ಗಿಲ್ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ರೋಹಿತ್ ಶರ್ಮಾ 83 ರನ್ ಬಾರಿಸಿ ಮದುಶಂಕ ಬೌಲಿಂಗ್‌ನಲ್ಲಿ ವಿಕೆಟ್‌ ಒಪ್ಪಿಸಿದರು.

ನಂತರ ಜೊತೆಯಾದ ವಿರಾಟ್ ಕೊಹ್ಲಿ ಹಾಗು ಶ್ರೇಯಸ್ ಅಯ್ಯರ್ ತಂಡದ ಮೊತ್ತವನ್ನು ಹೆಚ್ಚಿಸಿದರು. ಆದ್ರೆ 28 ರನ್ ಗಳಿಸಿದ್ದ ವೇಳೆ ಅಯ್ಯರ್ ಔಟಾದರು. ಬಳಿಕ ಬಂದ ರಾಹುಲ್ ಆಕರ್ಷಕ ಬ್ಯಾಟಿಂಗ್ ಮೂಲಕ ಗಮನ ಸೆಳೆದರು. ರಾಹುಲ್ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇತ್ತ ಕೊಹ್ಲಿ ಬ್ಯಾಟ್ ನಿಂದ ರನ್ ನ ಸುರಿಮಳೆ ಬರಲು ಆರಂಬಿಸಿತು.

87 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 113 ರನ್ ಬಾರಿಸಿದರು.
ಅಂತಿಮವಾಗಿ ಭಾರತ ಇತರ ಆಟಗಾರರ ಸಹಾಯದಿಂದ ಬೃಹತ್ ಟಾರ್ಗೆಟ್ ನೀಡಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!