ಕೊಹ್ಲಿ ಅಕರ್ಷಕ ಅರ್ಧಶತಕ : ಕೆಕೆಆರ್‌ ಗೆಲುವಿಗೆ 183 ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿರಾಟ್ ಕೊಹ್ಲಿ ಬಾರಿಸಿದ ಅಕರ್ಷಕ ಅರ್ಧಶತಕ ಹಾಗೂ ಗ್ರೀನ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಬಾರಿಸಿದ್ದು, ಕೆಕೆಆರ್‌ಗೆ ಗೆಲ್ಲಲು ಸವಾಲಿನ ಗುರಿ ನೀಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದಬೆಂಗಳೂರು ತಂಡವು ಆರಂಭದಲ್ಲೇ ನಾಯಕ ಪ್ಲೆಸಿಸ್ ವಿ 8 ರನ್ ಬಾರಿಸಿ ಹರ್ಷಿತ್ ರಾಣಗೆ ವಿಕೆಟ್‌ ಒಪ್ಪಿಸಿದರು.

ಕೇವಲ 17 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ ಎರಡನೇ ವಿಕೆಟ್‌ಗೆ ಕ್ಯಾಮರೋನ್ ಗ್ರೀನ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಎರಡನೇ ವಿಕೆಟ್‌ಗೆ ಈ ಜೋಡಿ 65 ರನ್‌ಗಳ ಜತೆಯಾಟವಾಡಿತು. ಕ್ಯಾಮರೋನ್ ಗ್ರೀನ್ ಕೇವಲ 21 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 33 ರನ್ ಬಾರಿಸಿ ಆಂಡ್ರೆ ರಸೆಲ್‌ಗೆ ವಿಕೆಟ್‌ ಒಪ್ಪಿಸಿದರು.

ವಿರಾಟ್ ಕೊಹ್ಲಿ ಮತ್ತೊಮ್ಮೆ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕೊಹ್ಲಿ ಕೇವಲ 36 ಎಸೆತಗಳನ್ನು ಎದುರಿಸಿ ಆಕರ್ಷಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ವಿರಾಟ್ ಕೊಹ್ಲಿ 59 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 83 ರನ್ ಸಿಡಿಸಿದರು.

ಗ್ರೀನ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ ಫಾರ್ಮ್‌ ಕಂಡುಕೊಳ್ಳುವ ಯತ್ನ ನಡೆಸಿದರಾದರೂ ದೊಡ್ಡ ಮೊತ್ತ ಕಲೆಹಾಕಲು ಯಶಸ್ವಿಯಾಗಲಿಲ್ಲ. ಮ್ಯಾಕ್ಸಿ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 28 ರನ್ ಬಾರಿಸಿ ನರೈನ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ರಜತ್ ಪಾಟೀದಾರ್ ಹಾಗೂ ಅನೂಜ್ ರಾವತ್ ತಲಾ 3 ರನ್ ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರುಇನ್ನು ಕೊನೆಯಲ್ಲಿ ದಿನೇಶ್ ಕಾರ್ತಿಕ್ ಮತ್ತೊಮ್ಮೆ ಸ್ಪೋಟಕ ಬ್ಯಾಟಿಂಗ್ ನಡೆಸಿ ಆಸರೆಯಾದರು. ಡಿಕೆ 8 ಎಸೆತಗಳಲ್ಲಿ 3 ಬೌಂಡರಿ ಸಹಿತ 20 ರನ್ ಬಾರಿಸಿ ಕೊನೆಯ ಎಸೆತದಲ್ಲಿ ರನೌಟ್ ಆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!