RECRUITMENT | ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನಲ್ಲಿ 36 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಖಾಲಿ ಇರುವ 36 ಲೆಕ್ಕಿಗರು, ಹಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಜವಾನರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ, 12ನೇ ತರಗತಿ, ಪದವಿ ವಿದ್ಯಾರ್ಹತೆ ಮತ್ತು ಮಾರ್ಚ್‌ 16,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 16,2023ರೊಳಗೆ ಅರ್ಜಿ ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!