ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ ಮಂಡಳಿಯ ಗುರಿಯಾಗಿದೆ ಎಂದು ಕೋಲಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಮಾಲೂರು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದ್ದಾರೆ.
ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ – ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಯ ಹಾಲು ಒಕ್ಕೂಟದಲ್ಲಿ ಪ್ರತಿದಿನದ ಸಂಗ್ರಹಣೆ ಪ್ರಮಾಣ 10 ಲಕ್ಷ ಲೀಟರುಗಳಿಗೆ ಏರಿತ್ತು. ಒಕ್ಕೂಟದ ವಿಭಜನೆ ನಂತರ ಕೋಲಾರದಲ್ಲಿ ಸಂಗ್ರಹಣೆ ಪ್ರಮಾಣ ಸರಿದೂಗಿಸಲು ಒಂದು ವರ್ಷದ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ