ಹೊಸದಿಗಂತ ವರದಿ,ಬೀದರ್:
ಕೋಲ್ಕತ್ತದ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿರುವುದನ್ನು ಖಂಡಿಸಿ, ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಶನಿವಾರ ರಾತ್ರಿ ೮ ಗಂಟೆಗೆ ಮೊಂಬತ್ತಿ ಮೆರವಣಿಗೆ ನಡೆಯಿತು.
ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಉಲ್ಲಾಸಿನಿ ವಿಕ್ರಮ್ ಮುದಾಳೆ ಅವರ ನೇತೃತ್ವದಲ್ಲಿ ಮೋರ್ಚಾ ಕಾರ್ಯಕರ್ತೆಯರು ಕೈಯಲ್ಲಿ ಮೊಂಬತ್ತಿ ಹಿಡಿದು ಜಿಲ್ಲಾ ಕಾರಾಗೃಹ ಸಮೀಪದ ಸಾಯಿಬಾಬಾ ಮಂದಿರದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ತಾಯಿ ಮತ್ತು ಮಗು ವೃತ್ತದ ವರೆಗೆ ಮೌನ ಮೆರವಣಿಗೆ ನಡೆಸಿದರು.
ಮಹಿಳಾ ಮೋರ್ಚಾ ರಾಜ್ಯ ಘಟಕದ ಕರೆಯ ಮೇರೆಗೆ ಮೊಂಬತ್ತಿ ಮೆರವಣಿಗೆ ನಡೆಸಲಾಗಿದೆ. ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಮೆರವಣಿಗೆ ನಂತರ ಮಾತನಾಡಿದ ಉಲ್ಲಾಸಿನಿ ವಿಕ್ರಮ ಮುದಾಳೆ ಆಗ್ರಹಿಸಿದರು.
ಮಹಿಳಾ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹೇಮಾ ತುಕ್ಕಾರೆಡ್ಡಿ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಮುಖಂಡ ವಿಕ್ರಮ ಮುದಾಳೆ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ, ಬಿಜೆಪಿ ಬೀದರ್ ನಗರ ಘಟಕದ ಅಧ್ಯಕ್ಷ ಶಶಿಧರ ಹೊಸಳ್ಳಿ, ಮಹಿಳಾ ಮೋರ್ಚಾ ನಗರ ಘಟಕದ ಅಧ್ಯಕ್ಷೆ ಯೋಗೇಶ್ವರಿ ಸೋನಕಾಂಬಳೆ, ಸೌಭಾಗ್ಯವತಿ, ಲುಂಬಿಣಿ ಗೌತಮ,ಹಹೇಮಲತಾಜೊಶಿ,ಪ್ರಸನ್ನ ಲಕ್ಮೀ ದೇಶಪಾಂಡೆ, ಪಾಂಡೆಮಾಯಾವತಿ ಕೋಟೆ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.