ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತಾ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ .ಜಿ ಕಾರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಮಾಜಿ ಪೊಲೀಸ್ ಅಧಿಕಾರಿ ಅಭಿಜಿತ್ ಮೊಂಡಲ್ ಅವರಿಗೆ ಕೋಲ್ಕತಾ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
90 ದಿನಗಳ ಅವಧಿಯಲ್ಲಿ ಸಿಬಿಐ ಜಾರ್ಜ್ ಶೀಟ್ ಸಲ್ಲಿಸಲು ಸಾಧ್ಯವಾಗದ ಕಾರಣ ಸೀಲ್ಡಾ ನ್ಯಾಯಾಲಯವು ತಾಲಾ ಪೊಲೀಸ್ ಠಾಣೆಯ ಮಾಜಿ ಅಧಿಕಾರಿ ಅಭಿಜಿತ್ ಮೊಂಡಲ್ ಮತ್ತು ಆರ್ .ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರಿಗೆ ಜಾಮೀನು ನೀಡಿದೆ.