ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ.

ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ತೆಗೆದುಕೊಂಡಿದೆ. ಮಂಗಳವಾರ ವಿಚಾರಣೆಯನ್ನು ನಡೆಸಲಾಗುವುದು.

ಸಿಜೆಐ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಇಡೀ ದೇಶದಲ್ಲಿ ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಈ ಕ್ರಮಕ್ಕೆ ಮುಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!