ಕೋಲ್ಕತ್ತಾ ವೈದ್ಯೆ ಹತ್ಯೆ ಪ್ರಕರಣ: ಎಫ್‌ಐಆರ್ ದಾಖಲು ವಿಳಂಬ, ಮರಣೋತ್ತರ ಪರೀಕ್ಷೆ ಬಗ್ಗೆ ಸುಪ್ರೀಂ ‌ಸಂದೇಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿದೆ.

ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿರುವ ವಿಚಾರಣೆಯ ಸ್ಥಿತಿ ವರದಿಯನ್ನು ಪರಿಶೀಲಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಿಸುವಲ್ಲಿನ ವಿಳಂಬವಾಗಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇಂದು ಆರಂಭಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಅಂತ್ಯಸಂಸ್ಕಾರ ಮಾಡಿದ ನಂತರ ರಾತ್ರಿ 11:45 ಕ್ಕೆ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಈ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯ ಬಗ್ಗೆ ನ್ಯಾಯಾಲಯ ಪ್ರಶ್ನೆ ಮಾಡಿದೆ. ಆರಂಭದಲ್ಲಿ, ರಾಜ್ಯ ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಇದು ಆತ್ಮಹತ್ಯೆ ಎಂದು ತಿಳಿಸಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ವರದಿ ಮಾಡಿದೆ. ನಂತರವೇ ಪೊಲೀಸರು ಇದೊಂದು ಕೊಲೆ ಎಂದು ಒಪ್ಪಿಕೊಂಡಿದ್ದಾರೆ. ಸಂತ್ರಸ್ತೆಯ ಸ್ನೇಹಿತನು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದ್ದು, ನಂತರದ ಬೆಳವಣಿಗೆಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ವೀಡಿಯೊಗ್ರಫಿಗೆ ಸಿಬಿಐ ಒತ್ತಾಯಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!