ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ CBI ಗೆ ವರ್ಗಾಯಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಕೋಲ್ಕತಾ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ.
ಎಲ್ಲಾ ದಾಖಲೆಗಳನ್ನು ತಕ್ಷಣ ಸಿಬಿಐಗೆ ಹಸ್ತಾಂತರಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ.
ಆರಂಭದಲ್ಲಿಯೇ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಗಿನ ಪ್ರಾಂಶುಪಾಲರಾದ ಡಾ ಸಂದೀಪ್ ಘೋಷ್ ಅವರನ್ನು ಮೊದಲು ವಿಚಾರಣೆಗೆ ಒಳಪಡಿಸಬೇಕಿತ್ತು ಎಂದು ಅಭಿಪ್ರಾಯ ಪಟ್ಟಿದೆ. ಅಲ್ಲದೇ ಘೋಷ್ ಅವರು ರಾಜೀನಾಮೆ ನೀಡಿದ ಗಂಟೆಗಳ ನಂತರ ಮತ್ತೊಂದು ಕಾಲೇಜಿನ ಪ್ರಾಂಶುಪಾಲರಾಗಿ ಏಕೆ ನೇಮಕಗೊಂಡರು ಎಂದು ಪೀಠವು ರಾಜ್ಯ ಸರ್ಕಾರದ ವಕೀಲರನ್ನು ಪ್ರಶ್ನಿಸಿತು.