ಕೋಲ್ಕತಾ ಹೈಕೋರ್ಟ್ ಜಡ್ಜ್ ರಾಜೀನಾಮೆ ಘೋಷಣೆ: ರಾಜಕೀಯದತ್ತ ಮುಖ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತಾ ಹೈಕೋರ್ಟ್ ಜಡ್ಜ್ ಅಭಿಶೇಕ್ ಗಂಗೋಪಾಧ್ಯಾಯ ರಾಜೀನಾಮೆ ನೀಡಿದ್ದಾರೆ. ರಾಜಕೀಯದತ್ತ ಮುಖ ಮಾಡಿದ್ದಾರೆ.
ಈಗಾಗಲೇ ತಮ್ಮ ರಾಜಕೀಯ ಪ್ರವೇಶವನ್ನು ಅಭಿಜಿತ್ ಗಂಗೋಪಾದ್ಯಯ ಖಚಿತಪಡಿಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ಬಿಜೆಪಿ ಸೇರಿಕೊಳ್ಳು ಸಾಧ್ಯತೆ ಎಂದು ಮೂಲಗಳು ಹೇಳುತ್ತಿವೆ.

ಮಾರ್ಚ್ 5 ರಂದು ಸ್ಥಾನದಿಂದ ಹೊರಬರುವುದಾಗಿ ಅಭಿಜಿತ್ ಗಂಗೋಪಾದ್ಯ ಹೇಳಿದ್ದಾರೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ ಸತತವಾಗಿ ಸವಾಲು ಹಾಕಿತ್ತು. ಇದರಿಂದ ನಾನು ರಾಜಕೀಯ ಪ್ರವೇಶ ಮಾಡಲು ಸಾಧ್ಯವಾಯಿತು. ಇದಕ್ಕಾಗಿ ಟಿಎಂಸಿಗೆ ಧನ್ಯವಾದ ಹೇಳುತ್ತೇನೆ ಎಂದು ಅಭಿಜಿತ್ ಗಂಗೋಪಾಧ್ಯಾಯ ಹೇಳಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಸೇರಿಕೊಳ್ಳಬೇಕು ಅನ್ನೋ ಕುರಿತು ಚರ್ಚಿಸುತ್ತಿದ್ದೇನೆ. ಆದರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ.

ಬಿಜೆಪಿ, ಕಾಂಗ್ರೆಸ್ ಅಥವಾ ಕಮ್ಯೂನಿಸ್ಟ್ ಪಕ್ಷಗಳ ಪೈಕಿ ಒಂದಕ್ಕೆ ಸೇರಿಕೊಳ್ಳುವ ಕುರಿತು ಚರ್ಚಿಸುತ್ತಿದ್ದೇನೆ. ಯಾವುದೇ ಕಾರಣಕ್ಕೂ ತೃಣಮೂಲ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶವನ್ನು ಅಭಿಜಿತ್ ಗಂಗೋಪಾಧ್ಯಾಯ ಖಚಿತಪಡಿಸಿದ್ದಾರೆ. ಇದೀಗ ಪಶ್ಚಿಮ ಬಂಗಾಳದಲ್ಲಿನ ಲೋಕಸಭಾ ಚುನಾವಣೆ ಕಣ ಮತ್ತಷ್ಟು ರಂಗೇರಲಿದೆ.

ಟಿಎಂಸಿ ಸರ್ಕಾರದ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಅಕ್ರಮವಾಗಿ ನಕಲಿ ಜಾತಿ ಪ್ರಮಾಣಪತ್ರ ವಿಚಾರಣೆಯನ್ನು ಸಿಬಿಐ ತನಿಖೆಗೆ ಆದೇಶಿಸಿದ ಅಭಿಜಿತ್ ಗಂಗೋಪಾಧ್ಯಯ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ್ದ ಗಂಗೋಪಾಧ್ಯಾಯ ಅವರು ಸಿಬಿಐ ತನಿಖೆಗೆ ಕಳೆದ ವಾರ ಆದೇಶಿಸಿದ್ದರು. ಇದರ ವಿರುದ್ಧ ತೃಣಮೂಲ ಕಾಂಗ್ರೆಸ್‌ ಸರ್ಕಾರ ವಿಭಾಗೀಯ ಪೀಠದ ಕದ ಬಡಿದಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ। ಸೌಮೇನ್‌ ಸೇನ್‌ ಅವರಿದ್ದ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದರು.ಮಧ್ಯಪ್ರವೇಶಿಸಿದ ಸುಪ್ರೀಂ ಕೋರ್ಟ್ ಜಡ್ಜ್ ನಡುವಿನ ಕಾದಾಟಕ್ಕೆ ಬ್ರೇಕ್ ಹಾಕಿತ್ತು.ಎರಡೂ ಪೀಠಗಳ ಎದುರು ನಡೆಯುತ್ತಿದ್ದ ಎಲ್ಲ ವಿಚಾರಣೆಗಳನ್ನೂ ನಿಲ್ಲಿಸುವಂತೆ ತಾಕೀತು ಮಾಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!