ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ: ಮುಂದಿನ ನಡೆ ಬಿಜೆಪಿಯ ಕಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ಹೈಕೋರ್ಟ್‍ನ (Calcutta High Court) ನ್ಯಾಯಮೂರ್ತಿ ಹುದ್ದೆಗೆ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ (Abhijit Gangopadhyay) ರಾಜೀನಾಮೆ ನೀಡಿದ್ದು, ಮುಂದೆ ಭಾರತೀಯ ಜನತಾ ಪಾರ್ಟಿ (BJP) ಸೇರುವುದಾಗಿ ಹೇಳಿದ್ದಾರೆ.

ತಮ್ಮ ಸಾಲ್ಟ್ ಲೇಕ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಈ ಮಾರ್ಚ್ 7 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha elections) ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ತೃಣಮೂಲ ಕಾಂಗ್ರೆಸ್‍ನ (TMC) ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿಯಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಆಡಳಿತ ಪಕ್ಷದ ಅಪಹಾಸ್ಯ ಮತ್ತು ಹೇಳಿಕೆಗಳು ನನ್ನನ್ನು ಈ ಹೆಜ್ಜೆ ಇಡಲು ಪ್ರೇರೇಪಿಸಿತು. ಆಡಳಿತ ಪಕ್ಷ ನನ್ನನ್ನು ಹಲವು ಬಾರಿ ಅವಮಾನಿಸಿದೆ. ಅವರ ವಕ್ತಾರರು ನನ್ನ ಮೇಲೆ ಅಸಂಸದೀಯ ಪದಗಳಿಂದ ದಾಳಿ ನಡೆಸಿದ್ದಾರೆ. ಅವರಿಗೆ ಶಿಕ್ಷಣದ ಸಮಸ್ಯೆ ಇದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಆಡಳಿತ ಪಕ್ಷದ ನಾಯಕರು ರಾಜಕೀಯ ಅಖಾಡಕ್ಕೆ ಬಂದು ಹೋರಾಡುವಂತೆ ನನಗೆ ಹಲವಾರು ಬಾರಿ ಸವಾಲು ಹಾಕಿದ್ದಾರೆ. ಹಾಗಾಗಿ ಅವರ ಆಸೆಗಳನ್ನು ಪೂರೈಸಲು ನಾನು ಯೋಚಿಸಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.

ಅಭಿಜಿತ್ ಗಂಗೋಪಾಧ್ಯಾಯ ಭಾನುವಾರ ನ್ಯಾಯಾಂಗವನ್ನು ತೊರೆಯುತ್ತಿರುವುದಾಗಿ ಹೇಳಿದ್ದರು. ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ ಗಂಟೆಗಳ ನಂತರ, ಅದರ ಪ್ರತಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಲಾಯಿತು. ಸಂವಿಧಾನದ 217 (1) (ಎ) ವಿಧಿಯ ಅಡಿಯಲ್ಲಿ ತಕ್ಷಣವೇ ರಾಜೀನಾಮೆ ಸ್ವಿಕೃತವಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!