ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ ಪಂದ್ಯವಳಿಯ 35ನೇ ಪಂದ್ಯವು ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಗುಜರಾತ್ ಟೈಟನ್ಸ್ ಪಂದ್ಯವಳಿಯಲ್ಲಿ ತಾನಾಡಿದ 6 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಪಡೆದು ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಕೋಲ್ಕತಾ ನೈಟ್ ರೈಡರ್ಸ್ ತಂಡ ಆಡಿದ 7 ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದು 7ನೇ ಸ್ಥಾನದಲ್ಲಿದೆ. ಕೊನೆಯ ಮೂರು ಪಂದ್ಯಗಳಲ್ಲಿ ಸತತ ಸೋಲು ಕಂಡಿರುವ ಕೊಲ್ಕತ್ತಾ ಗೆಲ್ಲಲೇ ಬೇಕಾದ ಒತ್ತಡದಲ್ಲಿ ಕಣಕ್ಕಿಳಿದಿದೆ.
ಗುಜರಾತ್ ಟೈಟನ್ಸ್ ತಂಡ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ನಾಯಕ ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಸ್ಸಾಗಿದ್ದು, ವಿಜಯ್ ಶಂಕರ್ ತಂಡದಿಂದ ಹೊರಬಿದ್ದಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಸ್ಯಾಮ್ ಬಿಲ್ಲಿಂಗ್ಸ್, ರಿಂಕು ಸಿಂಗ್ ಹಾಗೂ ಟಿಮ್ ಸೌಥಿ ಆಡುವ ಬಳಗಕ್ಕೆ ಸೇರ್ಪಡೆಯಾಗಿದ್ದಾರೆ.
ಎರಡೂ ತಂಡಗಳ ಪ್ಲೇಯಿಂಗ್ XI
ಕೋಲ್ಕತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಸುನೀಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿ.ಕೀ), ರಿಂಕು ಸಿಂಗ್, ಆಂಡ್ರೆ ರಸೆಲ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿ.ಕೀ), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗ್ಯೂಸನ್, ಯಶ್ ದಯಾಳ್, ಮೊಹಮ್ಮದ್ ಶಮಿ